ಶಿರಸಿ: ತಾಲೂಕಿನ ಶಕ್ತಿ ದೇವತೆಯಾದ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ಮಾರ್ಚ್ 15 ರಿಂದ ಪ್ರಾರಂಭವಾಗಲಿದ್ದು, ಈ ಕುರಿತಂತೆ ಶಿರಸಿ ಆಡಳಿತ ಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಜಾತ್ರೆಯು ಉತ್ತಮ ವಾತಾವರಣದಲ್ಲಿ ನಡೆಯುವಂತಾಗಬೇಕು. ಶ್ರದ್ಧಾಭಕ್ತಿಯಿಂದ ನಾಡಿನ ಎಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಸೂಕ್ತ ತಯಾರಿಯನ್ನು ಕೈಗೊಳ್ಳಬೇಕು ಹಾಗೂ ಕೊರೋನಾದ ಮುನ್ನೆಚ್ಚರಿಕೆಯೊಂದಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಿರಸಿ ಉಪ ವಿಭಾಗ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.