ಯಲ್ಲಾಪುರ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಇಂದು ಕುಂದರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟಾ ಗ್ರಾಮದಲ್ಲಿ ” ಗ್ರಾಮ ಒನ್ ” ನಾಗರಿಕ ಸೇವಾ ಕೇಂದ್ರವನ್ನು ಉದ್ಘಾಟಿಸಿ, ಗ್ರಾಮ ಒನ್ ಯೋಜನೆಯ ಮಾಹಿತಿಯನ್ನು ಹೊಂದಿರುವ ಕರಪತ್ರವನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಯುವ ನಾಯಕರಾದ ವಿವೇಕ್ ಹೆಬ್ಬಾರ್ , ಗ್ರಾಮ ಪಂಚಾಯತ ಅಧ್ಯಕ್ಷರಾದ ದೀಪಾ ಸಿದ್ದಿ, ಉಪಾಧ್ಯಕ್ಷರಾದ ದಾಕ್ಲು ಪಾಟೀಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದತ್ತು ನಾಯ್ಕ, ತಾಲೂಕಾ ಪಂಚಾಯತ ಮಾಜಿ ಸದಸ್ಯ ನಟರಾಜ ಗೌಡರ್, ಸಾಮಾಜಿಕ ಜಾಲತಾದ ಪ್ರಮುಖರು ಹಾಗೂ ಗ್ರಾಮ ಒನ್ ಕೇಂದ್ರದ ವ್ಯವಸ್ಥಾಪಕರಾದ ರಾಘವೇಂದ್ರ ಕುಂದರಗಿ ಹಾಗೂ ಗ್ರಾಮ ಪಂಚಾಯತ ಸದಸ್ಯರು, ಸ್ಥಳೀಯ ಪ್ರಮುಖರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.