
ಶಿರಸಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ.
ಅರಸಾಪುರದ ಮಂಜುನಾಥ ನಾಯ್ಕ (23) ಬಂಧಿತ ಆರೋಪಿಯಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ದೇಹ ಸಂಪರ್ಕಕ್ಕೆ ಬಳಸಿಕೊಂಡಿದ್ದಾನೆ ಎಂದು ಆಕೆಯ ಪಾಲಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗ್ರಾಮೀಣ ಠಾಣೆ ಪಿಎಸ್‍ಐ ಈರಯ್ಯ ಪ್ರಕರಣದ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.