ಯಲ್ಲಾಪುರ:ತಾಲೂಕಿನ ಬರಗದ್ದೆಯ ಪ್ರಾಥಮಿಕ ಶಾಲೆಯಲ್ಲಿ “ಬರಗದ್ದೆ ಶಾಲಾ ಹಬ್ಬ” ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು.
ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯಲ್ಲಿ ಶಾಲೆಯ ಹಾಗೂ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ. ಗುಣಮಟ್ಟದ ಶಿಕ್ಷಣವನ್ನು ನೀಡುವುದು ನಮ್ಮೆಲ್ಲರ ಗುರಿಯಾಗಿದೆ. ಶಾಲೆಯ ಬಿಸಿ ಊಟದ ಕೋಣೆಯ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಮಾತನಾಡಿ, ಸಮುದಾಯದ ತೊಡಗುವಿಕೆಯಿಂದ ಅಭಿವೃದ್ಧಿ ಸಾಧ್ಯವಿದೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿ ಸಮಾಜದ ಪ್ರಗತಿಗೆ ತಮ್ಮ ಕೊಡುಗೆಯನ್ನು ನೀಡಬೇಕು ಎಂದರು.
ನಿವೃತ್ತ ತಹಸೀಲ್ದಾರ್ ಡಿ.ಜಿ.ಹೆಗಡೆ, ಶಾಲಾ ಅಭಿವೃದ್ಧಿ ಸಮೀತಿಯ ಮಾಜಿ ಅಧ್ಯಕ್ಷ ರಾಘವೇಂದ್ರ ಧೂಳಿ, ಆಶಾ ಕಾರ್ಯಕರ್ತೆ ಬೇಬಿ ಪೂಜಾರಿ ಅವರನ್ನು ಗೌರವಿಸಲಾಯಿತು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ, ಸಿ.ಆರ್.ಪಿ.ಸಂಜೀವಕುಮಾರ ಹೊಸ್ಕೇರಿ, ಪತ್ರಕರ್ತ ಜಿ.ಎನ್.ಭಟ್ ತಟ್ಟಿಗದ್ದೆ, ಪ್ರಶಾಂತ ಜಿ., ವಿಶಾಲ ನಾಯ್ಕ, ಮುಖ್ಯಾಧ್ಯಾಪಕ ಸಣ್ಣಪ್ಪ ಭಾಗ್ವತ, ಶಿಕ್ಷಕ ನಾಗರಾಜ ಹೆಗಡೆ, ಗೋಪಾಲಕೃಷ್ಣ ಬಗನಪಾಲ್ ಇತರರಿದ್ದರು.