ಯಲ್ಲಾಪುರ:ತಾಲೂಕಿನ ಆನಗೋಡ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಸುದರ್ಶನ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಮಾ.1 ರಂದು ನಾದಾರಾಧನೆ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಸಂಗೀತ ವಿದ್ಯಾರ್ಥಿಗಳಿಂದ ನಾದಸೇವೆ ನಡೆಯಲಿದೆ. ಸಂಜೆ 6 ರಿಂದ ಬೆಳಗಿನವರೆಗೆ ಹಿರಿಯ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಕಲಾವಿದರಾದ ಗಣಪತಿ ಹೆಗಡೆ ಯಲ್ಲಾಪುರ ಹಾಗೂ ಗಣೇಶ ನೆರ್ಲೆಮನೆ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಮೊಕ್ತೇಸರ ಗಣಪತಿ ಮಾನಿಗದ್ದೆ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.