ಅಂಕೋಲಾ: ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಹೆಗ್ಗಾರನ ಪದ್ಮಾಪುರದ ಬಳಿ ಸಂಭವಿಸಿದೆ.
ಗೋಕರ್ಣದ ಮೇಲಿನಕೇರಿ ನಿವಾಸಿಯಾಗಿರುವ ಚಿದಾನಂದ ಶೆಟ್ಟಿ (36) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.
ಬೈಕ್ ಸವಾರನು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ವೇಳೆ ಎದುರಿನಿಂದ ಅತಿ ವೇಗವಾಗಿ ಬಂದ ಕಾರು ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನು ರಸ್ತೆಯಲ್ಲಿ ಬಿದ್ದ ಪರಿಣಾಮ ಆತನ ಎಡ ಕೈ ಮತ್ತು ಎಡ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಾಲೂಕಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ,ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.