ಬೆಂಗಳೂರು: ಕರ್ನಾಟಕ ರಾಜ್ಯ ಖಾಸಗಿ ಕೈಗಾರಿಕಾ ತರಬೇತಿ ಸಂಘಟಗಳ ಒಕ್ಕೂಟ ಬೆಂಗಳೂರು ಇವರು ವಿದ್ಯಾರ್ಥಿ ಕೇಂದ್ರೀಕೃತ ಅನುದಾನವನ್ನು ರದ್ದುಪಡಿಸಿ ಹಿಂದಿನ ೧೯೯೭ರ ಅನುದಾನ ಸಂಹಿತೆಯಂತೆ ಸಿಬ್ಬಂದಿ ವೇತನ ಅನುದಾನಕ್ಕೆ ಆಗ್ರಹಿಸಿ ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಕಾರ್ಯಕ್ರಮ ರೂಪಿಸಿದ್ದಾರೆ.
ಯಾವದೇ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ವೇತನಾನುದಾನಕ್ಕೆ ಒಳಪಡಿಸದಿರಲು ನಿರ್ಧರಿಸಲಾದ್ದು, ಇದು ಸರಕಾರದ ಆರ್ಥಿಕ ನೀತಿ ನಿರೂಪಣೆಯ ವಿಷಯವಾಗಿದೆ.
ರಾಜ್ಯದಲ್ಲಿ ಪ್ರಸ್ತುತ ಒಟ್ಟು ೧೦೪೧ ಅನುದಾನ ರಹಿತ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಒಟ್ಟು ೫೩೫೩ ಬೋಧಕ ಸಿಬ್ಬಂದಿ ಹಾಗೂ ೩೨೭೯ ಬೋಧಕೇತರ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ವೇತನಾನುದಾನಕ್ಕೆ ಒಳಪಡಿಸಲು ಅಂದಾಜು ರೂ. ೪೩೫ ಕೋಟಿ ಅನುದಾನ ಬೇಕಾಗುತ್ತದೆ. ಮಾನವೀಯತೆಯ ಆಧಾರದ ಮೇಲೆ ಈ ಸಿಬ್ಬಂದಿಗಳನ್ನು ವೇತನಾನುದಾನಕ್ಕೆ ಒಳಪಡಿಸಿ ಅವರ ಬಾಳಿನಲ್ಲಿ ಹೊಸ ಬೆಳಕು ಮೂಡಿಸುವ ಭರವಸೆ ಹೊಂದಿರುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.