ಶಿರಸಿ:ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಹಾಗೂ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ.ಸುನೀಲ್ ಕುಮಾರ್ ಜೊತೆಗೂಡಿ ಗುಡ್ನಾಪುರದ ಬಂಗಾರೇಶ್ವರ ದೇವಾಲಯದ ನೂತನ ಸಭಾಭವನವನ್ನು ಉದ್ಘಾಟಿಸಿದರು.
ನಂತರ ಸಭಾ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ದೇವಾಲಯದ ಆಡಳಿತ ಮಂಡಳಿಯವರು ಸಚಿವ ಶಿವರಾಮ ಹೆಬ್ಬಾರ್ ಹಾಗೂ ಶ್ರೀ ವಿ.ಸುನೀಲ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ್ ಹಾಗೂ ಬನವಾಸಿ, ಬದನಗೋಡ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಬಂಗಾರೇಶ್ವರ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.