ಶಿರಸಿ: ಸೋಂದಾ ಸೇವಾ ಸಹಕಾರಿ ಸಂಘದ ವತಿಯಿಂದ ವಿಶೇಷ ಮಾರಾಟ ಮೇಳ, ಆಲೆಮನೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.3 ಮತ್ತು 4ರಂದು ಬೆಳಿಗ್ಗೆ 10.30ರಿಂದ ರಾತ್ರಿ 8.30ರ ವರೆಗೆ ಸೋಂದಾ ಸೇವಾ ಸಹಕಾರಿ ಸಂಘದ ಆವಾರದಲ್ಲಿ ನಡೆಯಲಿದೆ.
ದಿನಬಳಕೆ, ಗೃಹಪಯೋಗಿ ವಸ್ತುಗಳು ಹಾಗೂ ವಿವಿಧ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.
ಮಾ.3ರಂದು ಬೆಳಿಗ್ಗೆ 10.30ಕ್ಕೆ ಸಂಘದ ವ್ಯಾಪ್ತಿಯ ಮಹಿಳೆಯರಿಗಾಗಿ ಚುಕ್ಕಿ ರಂಗೋಲಿ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಮೊದಲು ನೋಂದಾಯಿಸಿದ 25 ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ. ಹೆಸರನ್ನು ನೊಂದಾಯಿಸಿಕೊಳ್ಳಲು 9483322899 ಕ್ಕೆ ಸಂಪರ್ಕಿಸಬಹುದಾಗಿದೆ.