• Slide
  Slide
  Slide
  previous arrow
  next arrow
 • 2022-2023ರ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ

  300x250 AD

  ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-2023ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಎಲ್ಲಾ ಇಲಾಖೆಗಳಿಗೆ ಅನುದಾನವನ್ನು ಘೋಷಣೆ ಮಾಡಿದ್ದಾರೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದೆ.

  ಈ ಬಾರಿ 2,53,165 ಕೋಟಿ ರೂ. ಬಜೆಟ್​ ಮಂಡನೆ ಆಗಿದ್ದು, ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರವನ್ನು ಹೊಂದಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮವನ್ನು ರೂಪಿಸಲಾಗಿದೆ.

  ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಲಯವಾರು ವಿಂಗಡಣೆ ಮಾಡಿ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಯಾವ ವಲಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ಎಂಬ ಬಗ್ಗೆ ವಿವರ ಇಲ್ಲಿದೆ.

  300x250 AD

  ಯಾವ ಇಲಾಖೆಗೆ ಎಷ್ಟು ಮೊತ್ತ ಹಂಚಿಕೆಯಾಗಿದೆ ಇದರ ವಿವರ:

  • ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ
  • ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ
  • ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ
  • ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ
  • ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ,
  • ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ
  • ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ
  • ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ
  • ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ
  • ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ
  • ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ

  ಇನ್ನುಳಿದಂತೆ ರಾಜ್ಯಗಳ ಕೆರೆಗಳ ಅಭಿವೃದ್ದಿಗೆ 500 ಕೋಟಿ ರೂ, ತಾಲೂಕುಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ಹಾಗೂ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ 8409 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ.

  Share This
  300x250 AD
  300x250 AD
  300x250 AD
  Leaderboard Ad
  Back to top