ಸಿದ್ದಾಪುರ:ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ನೌಕರರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಮಾ.6 ರಂದು ಬೆಳಗ್ಗೆ 9 ರಿಂದ ಪಟ್ಟಣದ ನೆಹರು ಮೈದಾನದಲ್ಲಿ ನಡೆಯಲಿದೆ.
ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದರಾಮ ಎಸ್ ಪಂದ್ಯಾವಳಿ ಉದ್ಘಾಟಿಸಲಿದ್ದು, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ.
ತಹಸೀಲ್ದಾರ ಸಂತೋಷ ಕೆ.ಭಂಡಾರಿ, ತಾಪಂ ಇಒ ಪ್ರಶಾಂತರಾವ್, ಸಿಪಿಐ ಕುಮಾರ ಕೆ, ಪಪಂ ಮುಖ್ಯಾಧಿಕಾರಿ ಕುಮಾರ ನಾಯ್ಕ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ ಉಪಸ್ಥಿತರಿರುತ್ತಾರೆ.