ಯಲ್ಲಾಪುರ:ವಿಶ್ವದರ್ಶನ ಸ್ಕೂಲ್ ಆಫ್ ನರ್ಸಿಂಗ್ ನ 23ನೇ ಬ್ಯಾಚ್ ನ ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ ಹಾಗೂ ಸಮಾರಂಭ ಮಾರ್ಚ 5 ರಂದು ಮಧ್ಯಾಹ್ನ 3 ಗಂಟೆಗೆ ನಾಡವರ ಸಂಘದ ಸಮುದಾಯ ಭವನದಲ್ಲಿ ನಡೆಯಲಿದೆ.
ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಮಹೇಂದ್ರನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀನಿವಾಸ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಕಾರ್ಯದರ್ಶಿಗಳಾದ ನರಸಿಂಹ ಕೋಣೆಮನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.