Slide
Slide
Slide
previous arrow
next arrow

ಬಜೆಟ್‌ ನಲ್ಲಿ ಮೀನುಗಾರರಿಗೆ ‘ಮತ್ಸ್ಯ ಸಿರಿ’ ಯೋಜನೆ ಘೋಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ

300x250 AD

ಬೆಂಗಳೂರು: ಇಂದು ಬಜೆಟ್‌ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಮೀನುಗಾರಿಕಾ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಇದರಿಂದ ಮೀನುಗಾರರ ಬದುಕು ಸುಧಾರಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.

100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ “ಮತ್ಸ್ಯ ಸಿರಿ” ಎಂಬ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊದಲ ಬಾರಿಗೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.

300x250 AD

ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಿ, ವಿಶಿಷ್ಟ ತಳಿಗಳ ಮೀನು ಮತ್ತು ಚಿಪ್ಪು ಮೀನುಗಳ ಉತ್ಪಾದನೆಯ ಮೂಲಕ ಮೀನುಗಾರರ ಆದಾಯವನ್ನು ಹೆಚ್ಚಿಸಲು ನಮ್ಮ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ “ಮತ್ಸ್ಯ ಸಿರಿ” ಎಂಬ ವಿಶೇಷ ಯೋಜನೆ ರೂಪಿಸಲಾಗುವುದು ಎಂದಿದ್ದಾರೆ.

Share This
300x250 AD
300x250 AD
300x250 AD
Back to top