ಶಿರಸಿ:ಎಂ ಇ ಎಸ್ ನ ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಮರ್ಥ ಭಟ್, ಅಕ್ಷಯ್ ಗೋಕರ್ಣ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಬಾಲ್ ಬ್ಯಾಡ್ಮಿಂಟನ್ ಬ್ಲೂ ಆಗಿ ಆಯ್ಕೆ ಆಗಿದ್ದಾರೆ.
ಈ ಇಬ್ಬರು ವಿದ್ಯಾರ್ಥಿಗಳು ತಮಿಳುನಾಡಿನಲ್ಲಿ ನಡೆಯುವ ದಕ್ಷಿಣ ಭಾಗದ ಅಂತರ್ ವಿಶ್ವವಿದ್ಯಾಲಯ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಪ್ರಾಚಾರ್ಯರು ಬೋಧಕ ಭೋದಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.