ಯಲ್ಲಾಪುರ:ತಾಲೂಕಿನ ಅರಬೈಲ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕವಿಯತ್ರಿ ಶಿವಲೀಲಾ ಹುಣಸಗಿ ಅವರಿಗೆ ಡಾ.ಪಂಡಿತ್ ಪುಟ್ಟರಾಜ ಸೇವಾ ಸಮಿತಿ ನವದೆಹಲಿ ಸಂಸ್ಥೆಯವರು ಕೊಡುವ ಪ್ರತಿಷ್ಠಿತ ಪ್ರಶಸ್ತಿ ಡಾ.ಪಂ.ಪುಟ್ಟರಾಜ ಗವಾಯಿ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಲಭಿಸಿದೆ.
ಇವರ ಶಿಕ್ಷಣ ಹಾಗೂ ಸಾಹಿತ್ಯ ಸೇವೆಯನ್ನು ಮನ್ನಿಸಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಇವರು ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾವ್ ವೇದಿಕೆಯಲ್ಲಿ ರವಿವಾರ ಸಂಜೆ ನಡೆದ ಸಮಾರಂಭದಲ್ಲಿ ಡಾ.ಪಂ.ಪುಟ್ಟರಾಜ ಗವಾಯಿಗಳ ಜಯಂತ್ಯೋತ್ಸವ ದಂದು ಪ್ರಶಸ್ತಿ ನೀಡಿ ಗೌರವಿಸಲಾಯಿತು.