
ಕುಮಟಾ: ಕೋವಿಡ್ ಆಂತಕದ ನಡುವೆಯೂ ಕುಮಟಾ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಅತ್ಯಂತ ಶಿಸ್ತಿನಿಂದ ನಡೆದಿದೆ. ತಾಲೂಕಿನಾದ್ಯಂತ 11 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 2,179 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 2ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಸಾಲಾಗಿ ಬಂದು ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್ ನಿಯಮವನ್ನು ಪಾಲಿಸುವ ಮೂಲಕ ಶಿಸ್ತಿನಿಂದ ಹಾಗೂ ಸುರಕ್ಷಿತವಾಗಿ ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಟ್ಟಿದ್ದು ಪರೀಕ್ಷಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಪ್ರತಿ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ವಹಿಸಲಾಗಿದೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಮಾತ್ರ ಇರುವಂತೆ ವ್ಯವಸ್ಥೆ ಮಾಡಲಾಗಿದ್ದು ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿಮಾತ್ರ ಕುಳಿತುಕೊಂಡು ಪರೀಕ್ಷೆ ಬರೆಯುವಂತೆ ಕ್ರಮ ಕೈಗೊಳ್ಳಲಾಗಿದೆಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ ಮಾಹಿತಿ ನೀಡಿದ್ದಾರೆ.