
ಅಂಕೋಲಾ: ಕೋವಿಡ್ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೂಡ ತಮ್ಮ ಕರ್ತವ್ಯ ನಿರ್ವಹಿಸಿದ ಪ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಕಾಂಗ್ರೆಸ್ ಸಹಾಯ ಹಸ್ತ ಕಿಟ್ ಅನ್ನು ತಾಲೂಕಾ ವೈದ್ಯಾಧಿಕಾರಿಗಳ ಮೂಲಕ ಹಸ್ತಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ತಾ.ಪಂ. ಮಾಜಿ ಅಧ್ಯಕ್ಷೆ ಸುಜಾತಾ ಗಾಂವ್ಕರ್ ಮಾತನಾಡಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಸೇರಿದಂತೆ ಅನೃಕರು ಮುಂಚೂಣಿಯಲ್ಲಿ ನಿಂತು ಜನರ ಸೇವೆ ಮಾಡಿದ್ದಾರೆ. ಅವರ ಸೇವೆ ಅಮೂಲ್ಯವಾದದ್ದು. ಅವರ ಆರೋಗ್ಯ ಸುರಕ್ಷತೆಯ ದ್ರಷ್ಟಿಯಿಂದ ಅವರಿಗೆ ಸಹಾಯ ಹಸ್ತ ಕಿಟ್ ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಮಾನಂದ ನಾಯ್ಕ್ ಪಾಂಡುರಂಗ ಗೌಡ , ಕಾರ್ತಿಕ್ ಗೌಡ ವಿಶ್ವನಾಥ ನಾಯ್ಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.