
ಭಟ್ಕಳ: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೇಂದ್ರ ಸರ್ಕಾರದಿಂದ ಅನುಮೋದನೆಗೊಂಡ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕಳೆದ ಕೆಲ ದಿನಗಳ ಹಿಂದೆಯೇ ಬೃಹತ್ ಆಕ್ಸಿಜನ್ ಉತ್ಪಾದನಾ ಯಂತ್ರ ಬಂದು ತಲುಪಿದ್ದು ನಿರ್ಮಾಣ ಕಾರ್ಯ ವೇಗವಾಗಿ ಸಾಗಿದೆ. ಜುಲೈ ಕೊನೆಯ ವಾರ ಅಥವಾ ಆಗಸ್ಟ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ಸುಮಾರು 50ಲಕ್ಷ ರೂ.ವೆಚ್ಚದಲ್ಲಿ ಆಕ್ಸಿಜನ್ ಘಟಕ ನಿರ್ಮಾಣಗೊಳ್ಳಲಿದ್ದು ಶೀಘ್ರವೇ ಜನರ ಸೇವೆಗೆ ಲಭ್ಯವಾಗಲಿದೆ.