ಶಿರಸಿ:ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ” ವನ್ನು ಮಾ.13 ರವಿವಾರ ದಂದು ಏರ್ಪಡಿಸಲಾಗಿದೆ.
ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಖ್ಯಾತ ಮನೋ ವೈದ್ಯರಾದ ಡಾ.ಎಸ್.ಸಿ.ಕುಲಕರ್ಣಿ ಇವರು ಪಾಲ್ಗೊಂಡು ಸಲಹೆ, ಚಿಕಿತ್ಸೆ ನೀಡಲಿದ್ದಾರೆ. ಕಾರಣ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಈ ಸಂದರ್ಭದಲ್ಲಿ ಕೋವಿಡ್-19ರ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸುಧೀರ ಭಟ್ ಹಾಗೂ ಕಾರ್ಯದರ್ಶಿಗಳಾದ ಅನಂತ ಹೆಗಡೆ ಆಶೀಸರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.