ಅಂಕೋಲಾ: ಶಾಲೆಯಲ್ಲಿ ಮಕ್ಕಳು ಊಟ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಮೆಲ್ಚಾವಣಿ ಪದರ ಕುಸಿದು ಬಿದ್ದ ಘಟನೆ ತಾಲೂಕಿನ ನಿರ್ಮಲಾ ಹೃದಯ ಶಾಲೆಯಲ್ಲಿ ನಡೆದಿದೆ.
ಮೇಲ್ಚಾವಣಿ ಪದರ ಕುಸಿದ ಪರಿಣಾಮ ಐವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರು ಆಸ್ಪತ್ರೆಗೆ ಆಗಮಿಸಿದ್ದು, ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಘಟನೆಯ ಕುರಿತು ಪ್ರಕರಣ ದಾಖಲಾಗಿದೆ.