ಕಾರವಾರ: ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆರೋಗ್ಯ ಮತ್ತು ಮಾನಸಿಕವಾಗಿ ಸದೃಢರನ್ನಾಗಿಸುವ ಹಿತದೃಷ್ಟಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳಿಗೆ ಫೆ.18 ರಿಂದ ಮಾ.8 ರವರೆಗೆ ಯೋಗ ತರಬೇತಿ ನಡೆಯಿತು.
ಆಯುಷ ಇಲಾಖೆಯ ವೈದ್ಯರಾದ ಡಾ. ಪ್ರಕಾಶ ರವರು ಯೋಗಾಸನದ ವಿವಿಧ ಭಂಗಿಗಳನ್ನು ಸಿಬ್ಬಂದಿಗಳಿಗೆ ತಿಳಿಸಿಕೊಟ್ಟು ಅದರಿಂದ ಮಾನವನ ಶರೀರಕ್ಕೆ ಆಗುವ ಉಪಯೋಗಗಳ ಬಗ್ಗೆ ಸಿಬ್ಬಂದಿಗಳಿಗೆ ತಿಳಿಸಿಕೊಟ್ಟಿದ್ದು, ಸಶಸ್ತ್ರ ಪಡೆಯ ಅಧಿಕಾರಿ ಸಿಬ್ಬಂದಿಗಳು ಅದರ ಸದುಪಯೋಗವನ್ನು ಪಡೆದುಕೊಂಡರು.
ಮಾ.9 ರಂದು ಜಿಲ್ಲಾ ಸಶಸ್ತ್ರ ಪೊಲೀಸ್ ಸಭಾಂಗಣದಲ್ಲಿ ನಡೆದ ಯೋಗ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಉತ್ತರಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ. ಸುಮನ್ ಪೆನ್ನೇಕರ ಹಾಗೂ ಆಯುಷ ಇಲಾಖೆಯ ಮುಖ್ಯಸ್ಥರಾದ ಡಾ. ಲಲಿತಾ ಶೆಟ್ಟಿ ಹಾಗೂ ಯೋಗ ತರಬೇತಿ ನೀಡಿದ ಡಾ. ಪ್ರಕಾಶ್ ಹಾಗೂ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಉಪಾಧಿಕ್ಷಕರಾದ ದಿಲೀಪ್ ರವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಯುಷ ಇಲಾಖೆಯ ವತಿಯಿಂದ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಅರೋಗ್ಯವನ್ನು ಕಾಪಾಡಿಕೊಳ್ಳಲು ಉಪಯೋಗವಾಗುವಂತಹ ಔಷಧಿಯ ಕಿಟ್ ಗಳನ್ನು ವಿತರಿಸಲಾಯಿತು.