ಶಿರಸಿ:ದಕ್ಷಿಣ ಭಾರತದ ಸುಪ್ರಸಿದ್ದ ಶಿರಸಿಯ ಮಾರಿಕಾಂಬಾ ಜಾತ್ರೆಯು ಮಾ.15 ರಿಂದ 23 ರ ವರೆಗೆ ನಡೆಯಲಿದ್ದು, ಇದರ ನಿಮಿತ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಾರಿಗೆ ವ್ಯವಸ್ಥೆಯನ್ನು ಮಾಡಿದೆ.
ಶಿರಸಿ ಹಳೆ ಬಸ್ ನಿಲ್ದಾಣದ ಅಕ್ಕ ಪಕ್ಕದಲ್ಲಿ ಜಾತ್ರಾ ಅಂಗಡಿ ಮುಂಗಟ್ಟು ಹಾಕುವುದರಿಂದ ಬಸ್ ಸಂಚಾರಕ್ಕೆ ತೊಂದರೆಯಾಗುವುದರಿಂದ ಮಾ. 14ಬೆಳಿಗ್ಗೆ ಹಳೆ ಬಸ್ ನಿಲ್ದಾಣದ ಸಾರಿಗೆಗಳ ಕಾರ್ಯಾಚರಣೆಗಳನ್ನು ಹೊಸ ಬಸ್ ಹಾವೇರಿ, ಹುಬ್ಬಳ್ಳಿ, ಗದಗ, ಲಕ್ಷ್ಮೀಶ್ವರ, ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರ, ಗಂಗೋಳ್ಳಿ, ತ್ರಾಸಿ, ಕುಂದಾಪುರ, ಯಲ್ಲಾಪುರ, ದಾಂಡೇಲಿ, ಅಂಕೋಲಾ, ಕಾರವಾರ ಮತ್ತು ಪ್ರಮುಖ ಊರುಗಳಿಂದ ಸಾರಿಗೆಗಳನ್ನು ಕಾರ್ಯಾಚರಿಸಲಾಗುವುದು. ಜಾತ್ರೆಯ ದಿನಗಳಲ್ಲಿ ಹಾನಗಲ್, ಹಾವೇರಿ, ಹುಬ್ಬಳ್ಳಿ ಕಡೆಗೆ ಹೋಗುವ ಸಾರಿಗೆಗಳು ಶಿರಸಿ ಬಸ್ ನಿಲ್ದಾಣದಿಂದ ಅಶ್ವಿನಿ ಸರ್ಕಲ್, ಎಪಿಎಂಸಿ ಶಿರಸಿ ಘಟಕ, ವಿವೇಕಾನಂದ ಕ್ರಾಸ್, ಚಿಪಗಿ ಸರ್ಕಲ್ ಮಾರ್ಗವಾಗಿ ಸಂಚರಿಸುತ್ತದೆ.
ಶಿರಸಿ ಮಾರಿಕಾಂಬಾ ದೇವಸ್ಥಾನದ ಮುಂಭಾಗದ ರಸ್ತೆಯನ್ನು ಬಸ್ ಸಂಚಾರಕ್ಕೆ ನಿಷೇದಿಸಿರುವುದರಿಂದ ಬನವಾಸಿ ಮಾರ್ಗದ ಸಾರಿಗೆಗಳನ್ನು ರಾಮನಬೈಲ್ ಕ್ರಾಸನಿಂದ ಕಾರ್ಯಾಚರಣೆ ಮಾಡಲಾಗುವುದು. ಸಿದ್ದಾಪುರ , ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ ಸಾರಿಗೆಗಳನ್ನು ಶಿರಸಿ ಹೊಸ ಬಸ್ ನಿಲ್ದಾಣದಿಂದ ಪದ್ಮಶ್ರೀ ಸರ್ಕಲ್, ಹನುಮಾನ ವ್ಯಾಯಾಮ ಶಾಲೆ, ಐದು ರಸ್ತೆ ಸರ್ಕಲ್ ಮುಖಾಂತರ ಸಂಚರಿಸುತ್ತದೆ.
ಶಿರಸಿಯಿಂದ ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ ಭಾಗಕ್ಕೆಹೋಗುವ ಪ್ರಯಾಣಿಕರು ಶಿರಸಿ ಹೊಸ ಬಸ್ ನಿಲ್ದಾಣ ಅಥವಾ ಹನುಮಾನ ವ್ಯಾಯಾಮ ಶಾಲೆ ಆವರಣ ಬಸ್ ತಂಗುದಾಣದಿಂದ ಪ್ರಯಾಣಿಸಬಹುದಾಗಿದೆ. ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು,ಕುಂದಾಪುರ ಭಾಗದಿಂದ ಶಿರಸಿಗೆ ಬರುವ ಣಿಕರಿಗೆ ರಾಯಪ್ಪಾ ಹುಲೇಕಲ್ ಶಾಲೆಯ ಕಂಪೌಂಡದಲ್ಲಿ ಇಳಿಯುವ ವ್ಯವಸ್ಥೆ ಮಾಡಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಅಶ್ವಿನಿ ಸರ್ಕಲ್, ರಾಮನಬೈಲ್ ಕ್ರಾಸ್, ಎಪಿಎಂಸಿ ಕ್ರಾಸ್ ಹುಬ್ಬಳ್ಳಿ, ಹನುಮಾನ ವ್ಯಾಮ ಶಾಲೆ ಆವರಣ ಮತ್ತು ರಾಯಪ್ಪಾ ಹುಲೇಕಲ್ ಶಾಲಾ ಆವರಣದಲ್ಲಿ ತಾತ್ಕಾಲಿಕ ಬಸ್ ತಂಗುದಾಣಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ದೂರದ ಊರುಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಶಿರಸಿ ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೇಟ್ ವಿತರಿಸಲು ವ್ಯವಸ್ಥೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೭೭೬೦೯೯೧೭೨೫, ೭೭೬೦೯೯೧೭೦೨,
೭೭೬೦೯೯೧೭೧೩, ೭೭೬೦೯೯೧೭೧೨ ಮತ್ತು ೦೮೩೪೪ ೨೨೯೯೫೨ ಗೆ ಸಂಪರ್ಕಿಸಿ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.