• Slide
  Slide
  Slide
  previous arrow
  next arrow
 • ಕಾಶ್ಮೀರದಲ್ಲಿ 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ; ನಾಲ್ವರು ಭಯೋತ್ಪಾದಕರ ಹತ್ಯೆ

  300x250 AD

  ಶ್ರೀನಗರ: ಕಳೆದ 12 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದಕರ ನಿಗ್ರಹಕ್ಕೆ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸಿವೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ಬೆಳಿಗ್ಗೆ ಕಾಶ್ಮೀರದ ಪುಲ್ವಾಮಾ, ಗಂದರ್‌ಬಾಲ್ ಮತ್ತು ಹಂದ್ವಾರ ಪ್ರದೇಶದಲ್ಲಿ ಮೂರು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

  ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ. ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹಲವು ಕಾರ್ಯಾಚರಣೆಗಳನ್ನು ಆರಂಭಿಸಿವೆ ಎಂದು ಅವರು ಮಾಹಿತಿ ನೀಡಿದರು.

  ಐಜಿಪಿ ಕಾಶ್ಮೀರ ವಿಜಯ್ ಕುಮಾರ್, “ನಾವು ಕಳೆದ ರಾತ್ರಿ 4-5 ಸ್ಥಳಗಳಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ, ಇದುವರೆಗೆ ಪುಲ್ವಾಮಾದಲ್ಲಿ ಜೆಇಎಂನ ಇಬ್ಬರು ಭಯೋತ್ಪಾದಕರು, ಗಂದರ್ಬಾಲ್‌ನಲ್ಲಿ ಎಲ್ಇಟಿಯ ಒಬ್ಬ ಭಯೋತ್ಪಾದಕ ಮತ್ತು ಹಂದ್ವಾರದಲ್ಲಿ ಎಲ್ಇಟಿಯ ಒಬ್ಬ ಭಯೋತ್ಪಾದಕ ಹತರಾಗಿದ್ದಾರೆ” ಎಂದು ಹೇಳಿದರು.

  300x250 AD

  ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚೆವಾಕಲನ್ ಗ್ರಾಮದಲ್ಲಿ ನಿನ್ನೆ ಸಂಜೆ ಮೊದಲ ಎನ್‌ಕೌಂಟರ್ ಪ್ರಾರಂಭವಾಯಿತು, ಅಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಇನ್ನೂ ಇಬ್ಬರು ಉಗ್ರರು ಅಲ್ಲಿ ಸಿಕ್ಕಿಬಿದ್ದಿದ್ದಾರೆ.

  Share This
  300x250 AD
  300x250 AD
  300x250 AD
  Leaderboard Ad
  Back to top