• Slide
    Slide
    Slide
    previous arrow
    next arrow
  • ರೈತರ ಮನೆಗೆ ಕಂದಾಯ ದಾಖಲೆಗಳನ್ನು ತಲುಪಿಸುವ ಕಾರ್ಯಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    300x250 AD

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

    ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಗಿರಲಹಳ್ಳಿಯ ಹನುಮಪ್ಪ ದೊಡ್ಡಪ್ಪಯ್ಯ ಅವರಿಗೆ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ ಮೂಲಕ‌ ಇಂದು ಯೋಜನೆಗೆ ಚಾಲನೆ ನೀಡಿದರು.

    ಮನೆ ಬಾಗಿಲಿಗೆ ಯೋಜನೆಗೆ ಚಾಲನೆ ನೀಡಿದ ನಂತರ ಸಭಾ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ತೋಟಗಾರಿಕೆ ಹಾಗೂ ಕೃಷಿ ಉತ್ಪನ್ನಗಳನ್ನು ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ದವಸ ಧಾನ್ಯಗಳ ರಾಶಿ ಮಾಡಿದರು.

    300x250 AD

    ಕಂದಾಯ ಸಚಿವ ಆರ್ ಅಶೋಕ, ಆರೋಗ್ಯ ಸಚಿವ ಡಾ.ಸುಧಾಕರ್, ಪೌರಾಡಳಿತ ಎಂಟಿಬಿ ನಾಗರಾಜ್, ಕಂದಾಯ ಇಲಾಖೆಯ ಪ್ರಧಾನ‌ಕಾರ್ಯದರ್ಶಿ ತುಷಾರ ಗಿರಿನಾಥ, ಜಿಲ್ಲಾಧಿಕಾರಿ ಆರ್ ಲತಾ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top