Slide
Slide
Slide
previous arrow
next arrow

ಶಾಲಾ ಕಾಲೇಜುಗಳಲ್ಲಿ ಹಿಜಾಬ್’ಗೆ ಅವಕಾಶವಿಲ್ಲ; ಅಂತಿಮ ತೀರ್ಪು ನೀಡಿದ ಹೈಕೋರ್ಟ್​

300x250 AD

ಬೆಂಗಳೂರು: ಕಾಲೇಜಿನಿಂದ ಆರಂಭವಾದ ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್​ ಮಹತ್ವದ ತೀರ್ಪು ನೀಡಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಆದೇಶಿಸಿದೆ.

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಒಂದನ್ನೇ ಧರಿಸಿ ಬರಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ಹೈಕೋರ್ಟ್ ವಜಾಗೊಳಿಸಿದೆ.

ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ ಇದಕ್ಕೆ ಸರ್ಕಾರದ ಸಮವಸ್ತ್ರ ಸಂಹಿತೆ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್​ ಹೇಳಿದೆ.

300x250 AD

ಕಾಲೇಜುಗಳಲ್ಲಿ ಹಿಜಾಬ್​ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್​. ದೀಕ್ಷಿತ್​ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್​ ಅವರಿದ್ದ ಪೂರ್ಣಪೀಠ ಫೆ.25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸುವ ಮೂಲಕ ಹಿಜಾಬ್​ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಿದೆ.

Share This
300x250 AD
300x250 AD
300x250 AD
Back to top