
ಶಿರಸಿ: ಹಾಸ್ಟೆಲ್ಗಳನ್ನು ಪ್ರಾರಂಭಿಸಬೇಕು ಮತ್ತು ಅದಕ್ಕೂ ಪೂರ್ವದಲ್ಲಿ ಸ್ಯಾನಿಟೈಸರ್ ಮಾಡಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ವತಿಯಿಂದ ಪ್ರಭಾರಿ ಉಪನಿರ್ದೇಶಕರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಮತ್ತು ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಮನವಿ ನೀಡಿದರು. ಕಾರ್ಯಕರ್ತರಾದ ಭೂಮಿಕಾ ಹಿರೇಮಠ್, ವಿದ್ಯಾ ಹಾಗೂ ನಗರ ವಿದ್ಯಾರ್ಥಿನಿ ಪ್ರಮುಖ ಪೂಜಾ, ನಗರ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.