• Slide
    Slide
    Slide
    previous arrow
    next arrow
  • 60 ಕಿಮೀ ವ್ಯಾಪ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಇರುವಂತಿಲ್ಲ ; ನಿತಿನ್ ಗಡ್ಕರಿ

    300x250 AD

    ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಮೀ ವ್ಯಾಪ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಜಾ ಇರಬಾರದು ಮತ್ತು ಮುಂದಿನ ಮೂರು ತಿಂಗಳಲ್ಲಿ ನಿಯಮಗಳು ಸಂಪೂರ್ಣವಾಗಿ ಜಾರಿಗೆ ಬರುವಂತೆ ನೋಡಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು  ಲೋಕಸಭೆ ಅಧಿವೇಶನದಲ್ಲಿ ಹೇಳಿದ್ದಾರೆ.

    ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಮೀ ವ್ಯಾಪ್ತಿಯಲ್ಲಿ ಹೆಚ್ಚುವರಿ ಟೋಲ್ ಪ್ಲಾಜಾ ಇರಬಾರದು, ಇದ್ದರೆ ಮೂರು ತಿಂಗಳೊಳಗೆ ಮುಚ್ಚಲಾಗುವುದು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ

    60 ಕಿ.ಮೀ ವ್ಯಾಪ್ತಿಯಲ್ಲಿ ಒಂದೇ ಟೋಲ್ ಪ್ಲಾಜಾ ಇರುವುದನ್ನು ನಾನು ಖಚಿತಪಡಿಸಿಕೊಳ್ಳುತ್ತೇನೆ ಮತ್ತು ಎರಡನೇ ಟೋಲ್ ಪ್ಲಾಜಾ ಇದ್ದರೆ ಮುಂದಿನ ಮೂರು ತಿಂಗಳಲ್ಲಿ ಅದನ್ನು ಮುಚ್ಚಲಾಗುವುದು ಎಂದು . ಅವರ ಸಚಿವಾಲಯಕ್ಕೆ ಸಂಬಂಧಿಸಿದ ಅನುದಾನಗಳ ಬಗೆಗಿನ ಚರ್ಚೆಯ ಸಂದರ್ಭದಲ್ಲಿ ಅವರು ಮಾಹಿತಿ ನೀಡಿದ್ದಾರೆ. ಸದಸ್ಯರು ಪ್ರಸ್ತಾಪಿಸಿದ ಅಂಶಗಳನ್ನು ಉಲ್ಲೇಖಿಸಿದ ಅವರು, ಟೋಲ್ ಪ್ಲಾಜಾಗಳ ಬಳಿ ವಾಸಿಸುವ ಜನರು ಆಧಾರ್ ಕಾರ್ಡ್‌ಗಳನ್ನು ಬಳಸಿಕೊಂಡು ಪಾಸ್‌ಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದಿದ್ದಾರೆ.

    300x250 AD

    ಜಮ್ಮು ಮತ್ತು ಕಾಶ್ಮೀರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಿದ ಸಚಿವರು, ಪ್ರಸ್ತುತ ಜೊಜಿಲಾ ಸುರಂಗ ಯೋಜನೆಯಲ್ಲಿ ಸುಮಾರು 1,000 ಜನರು ಕೆಲಸ ಮಾಡುತ್ತಿದ್ದಾರೆ. “ಜಮ್ಮು ಮತ್ತು ಕಾಶ್ಮೀರದಲ್ಲಿ 7,000 ಕೋಟಿ ರೂಪಾಯಿಗಳ ಯೋಜನೆಗಳು ನಡೆಯುತ್ತಿವೆ. ಸುಮಾರು 1,000 ಜನರು ಝೋಜಿಲಾ ಸುರಂಗದೊಳಗೆ -8 ಡಿಗ್ರಿ ಸೆಲ್ಸಿಯಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು  ಹೇಳಿದರು.

    “ದೆಹಲಿ-ಅಮೃತಸರ-ಕತ್ರಾ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿದೆ. ಈ ವರ್ಷದ ಅಂತ್ಯದ ವೇಳೆಗೆ, ನಾವು 20 ಗಂಟೆಗಳಲ್ಲಿ ಶ್ರೀನಗರದಿಂದ ಮುಂಬೈ ತಲುಪಲು ಸಾಧ್ಯವಾಗುತ್ತದೆ ಮತ್ತು ದೆಹಲಿ ಮತ್ತು ಅಮೃತಸರ ನಡುವಿನ ಅಂತರವನ್ನು ನಾಲ್ಕು ಗಂಟೆಗಳಲ್ಲಿ ಕ್ರಮಿಸಲಾಗುವುದು” ಎಂದು ಅವರು ಹೇಳಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top