• Slide
    Slide
    Slide
    previous arrow
    next arrow
  • ರಾಜ್ಯದಲ್ಲಿ ʼಧಾರ್ಮಿಕ ದಿನʼವಾಗಿ ಆಚರಣೆಗೊಳ್ಳಲಿದೆ ಯುಗಾದಿ; ಸಚಿವೆ ಶಶಿಕಲಾ ಜೊಲ್ಲೆ ನಿರ್ಧಾರ

    300x250 AD

    ಬೆಂಗಳೂರು: ರಾಜ್ಯದಲ್ಲಿ ಇನ್ನು ಯುಗಾದಿ ಹಬ್ಬ ʼಧಾರ್ಮಿಕ ದಿನʼವಾಗಿ ಆಚರಿಸಲ್ಪಡಲಿದೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲೇ ದೇಗುಲಗಳಿಗೆ ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದಾರೆ.

    “ಧಾರ್ಮಿಕ ದಿನದಂದು ರಾಜ್ಯದ ಅಭಿವೃದ್ಧಿಗಾಗಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ದೇವಾಲಯಗಳಲ್ಲಿ ಕೈಗೊಳ್ಳಬೇಕು, ದೇವಾಲಯಗಳಲ್ಲಿನ ತಂಡಗಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಬೇಕು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಮಾಡಬೇಕು” ಎಂದು ಸೂಚನೆ ನೀಡಲಾಗಿದೆ.

    ಅಲ್ಲದೇ ಈ ದಿನವನ್ನು ದೇಗುಲಗಳ ಸಂಸ್ಕೃತಿ, ಮಹತ್ವವನ್ನು ತಿಳಿಯಪಡಿಸುವ ದಿನವನ್ನಾಗಿ ಆಚರಿಸಬೇಕು ಎಂದು ಸೂಚಿಸಲಾಗಿದೆ.

    300x250 AD

    ಪ್ರಸಕ್ತ ಸಾಲಿನಿಂದ ಪ್ರತಿವರ್ಷ ಶುಭಕೃತ್‌ ನಾಮ ಸಂವತ್ಸರ ಚಾಂದ್ರಮಾನ, ಸೌರಮಾನ ಯುಗಾದಿಯ ದಿನಗಳಂದು ನಮ್ಮ ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆಯನ್ನು ಆಚರಿಸುವಂತೆ ಸೂಚನೆ ನೀಡಿದ್ದೇನೆ ಎಂದು ಜೊಲ್ಲೆ ತಿಳಿಸಿದ್ದಾರೆ.

    ಅಧಿಸೂಚಿತ ದೇವಾಲಯಗಳಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ಸಾರ್ವಜನಿಕ ಭಕ್ತಾದಿಗಳ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ವಿಶೇಷ ಪಂಚಾಂಗ ಶ್ರವಣ ಮಾಡಿಸುವ ಮೂಲಕ ಸಾರ್ವಜನಿಕ ಭಕ್ತರಿಗೆ ಹೊಸ ಸಂವತ್ಸರದ ಶುಭಾಶುಭ ಫಲಗಳು, ಆದಾಯ ವ್ಯಯಗಳೂ, ನಕ್ಷತ್ರಗಳ ಫಲಗಳು ಮುಂತಾದವುಗಳನ್ನು ತಿಳಿದುಕೊಳ್ಳಲು ಅನುಕೂಲವಾಗುವಂತೆ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top