• Slide
    Slide
    Slide
    previous arrow
    next arrow
  • ಏ.1ಕ್ಕೆ ಪರೀಕ್ಷಾ ಪೆ ಚರ್ಚಾ; ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲಿರುವ ಮೋದಿ

    300x250 AD

    ನವದೆಹಲಿ: ʼಪರೀಕ್ಷಾ ಪೆ ಚರ್ಚಾʼ ಕಾರ್ಯಕ್ರಮದ ಐದನೇ ಆವೃತ್ತಿಯು ಈ ವರ್ಷದ ಏಪ್ರಿಲ್ 1 ರಂದು ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಪರೀಕ್ಷೆಯ ಒತ್ತಡವನ್ನು ಹೇಗೆ ಹೋಗಲಾಡಿಸಬಹುದು ಎಂಬುದರ ಕುರಿತು ತಮ್ಮ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

    ಪರಿಕ್ಷಾ ಪೇ ಚರ್ಚಾ ಒಂದು ಸಂವಾದಾತ್ಮಕ ಕಾರ್ಯಕ್ರಮವಾಗಿದ್ದು, ಇದರಲ್ಲಿ ಭಾರತ ಮತ್ತು ಸಾಗರೋತ್ತರ ಭಾರತೀಯ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಪ್ರಧಾನ ಮಂತ್ರಿಯೊಂದಿಗೆ ಸಂವಾದ ನಡೆಸುವ ಮೂಲಕ ಪರೀಕ್ಷೆಯನ್ನು ಉತ್ಸವವಾಗಿ ಆಚರಿಸಲು, ಪರೀಕ್ಷೆಗಳಿಂದ ಹೊರಹೊಮ್ಮುವ ಒತ್ತಡವನ್ನು ನಿವಾರಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

    300x250 AD

    ಕಾರ್ಯಕ್ರಮಕ್ಕಾಗಿ 9 ರಿಂದ 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಆನ್‌ಲೈನ್ ಸ್ಪರ್ಧೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

    Share This
    300x250 AD
    300x250 AD
    300x250 AD
    Leaderboard Ad
    Back to top