• first
    second
    third
    previous arrow
    next arrow
  • ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವ ತಯಾರಿ ಸಭೆ; ವಿದ್ಯಾರ್ಥಿಗಳ ಹಿತ ದೃಷ್ಠಿಯಿಂದ ಮುನ್ನೆಚ್ಚರಿಕೆ ಕ್ರಮ-ಸಕಲ ಸಿದ್ಧತೆ

    300x250 AD

    ಸಿದ್ದಾಪುರ:ತಾಲೂಕಿನಲ್ಲಿ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 1278ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ಮುನ್ನೆಚ್ಚರಿಕೆಯಾಗಿ ಎಲ್ಲ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಇಒ ಸದಾನಂದ ಸ್ವಾಮಿ ಎಸ್ ಹೇಳಿದರು.

    ಪಟ್ಟಣದ ಮಿನಿವಿಧಾನಸೌಧದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವ ತಯಾರಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

    ಪಟ್ಟಣದ ಎಸ್.ವಿ.ಬಾಲಕರ ಹಾಗೂ ಹಾಳದಕಟ್ಟಾ ಸರ್ಕಾರಿ ಪ್ರೌಢಶಾಲೆ ಮತ್ತು ಗ್ರಾಮೀಣ ಪ್ರದೇಶದ ಕಾನಸೂರಿನ ಕಾಳಿಕಾಭವಾನಿ, ಹೆಗ್ಗರಣಿಯ ಸ್ವಾಮಿ ವಿವೇಕಾನಂದ, ಬಿಳಗಿಯ ಸೀತಾರಾಮಚಂದ್ರ ಪ್ರೌಢಶಾಲೆ, ಹಲಗೇರಿಯ ಕರ್ನಾಟಕ ಪಬ್ಲಿಕ್ ಶಾಲೆ ಸೇರಿಂದತೆ ಏಳು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 108 ಕೊಠಡಿ ಮೇಲ್ವಿಚಾರಕರು,7 ಮುಖ್ಯ ಅಧೀಕ್ಷಕರು,7ಕಸ್ಟೋಡಿಯನ್,7ಸ್ಥಾನಿಕ ಜಾಗೃತ ದಳ,7ಮೊಬೈಲ್ ಸ್ವಾಧೀನಾಧಿಕಾರಿಗಳು ಸೇರಿದಂತೆ 175 ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ.

    ಕೊವಿಡ್ ನಿಯಮಾನುಸಾರವಾಗಿ ಪರೀಕ್ಷೆ ನಡೆಸಲಾಗುತ್ತಿದ್ದು ಪರಸ್ಪರ ಅಂತರ ಕಾಯ್ದುಕೊಳ್ಳಲು ಪ್ರತಿಕೇಂದ್ರದಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು.ಅನಾರೋಗ್ಯ ಪೀಡಿತ ಮಕ್ಕಳಿಗೆ ಪ್ರತ್ಯೇಕ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ 2 ಕೊಠಡಿಗಳನ್ನು ಕಾಯ್ದಿರಿಸಲಾಗುವುದು. ಮುನ್ನೆಚ್ಚರಿಕೆಯಾಗಿ ಒಂದು ಕೊವಿಡ್ ಕೇರ್ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ ಎಂದು ಹೇಳಿದರು.

    300x250 AD

    ಅಧ್ಯಕ್ಷತೆವಹಿಸಿದ್ದ ತಹಸೀಲ್ದಾರ ಸಂತೋಷ ಕೆ.ಭಂಡಾರಿ ಮಾತನಾಡಿ ಮಕ್ಕಳ ಸುರಕ್ಷತೆ ಅತ್ಯವಶ್ಯಕವಾಗಿದ್ದು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾಕಾರ್ಯಕರ್ತೆಯರನ್ನು ನಿಯೋಜಿಸಲಾಗುವುದು ಒಂದು ಅಂಬುಲೆನ್ಸ್ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸಿದ್ದವಾಗಿಡಲಾಗುವುದು. ಆರ್‍ಬಿಎಸ್‍ಕೆ ವಾಹನ ವೈದ್ಯರ ಸಹೀತವಾಗಿ ಪರೀಕ್ಷಾ ಕೇಂದ್ರದಲ್ಲಿ ಇರುತ್ತದೆ. ಪಟ್ಟಣದ ಪರೀಕ್ಷಾ ಕೇಂದ್ರವನ್ನು ಪಪಂ ಹಾಗೂ ಗ್ರಾಮೀಣ ಪರೀಕ್ಷಾ ಕೇಂದ್ರವನ್ನು ಗ್ರಾಪಂನವರು ಒಂದು ದಿನ ಮುಂಚಿತವಾಗಿ ಸ್ಯಾನಿಟೈಸರ್ ಮಾಡುವಂತೆ ಸೂಚಿಸಲಾಗಿದೆ.

    ಮುಖ್ಯಪರೀಕ್ಷಕರ ಹೊರತು ಉಳಿದ ಯಾವುದೇ ಸಿಬ್ಬಂದಿ ಮೊಬೈಲ್ ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟ ಸೂಚನೆ ನೀಡಿದ್ದು ಅಧಿಕಾರಿಗಳ ದೀಢಿರ್ ಭೇಟಿಯ ವೇಳೆ ಮೊಬೈಲ ಬಳಕೆ ಕಂಡು ಬಂದಲ್ಲಿ ಅಂತಹವರನ್ನು ತಕ್ಷಣದಲ್ಲೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು.

    ತಾಪಂ ಇಒ ಪ್ರಶಾಂತರಾವ್,ಪಪಂ ಮುಖ್ಯಾಧಿಕಾರಿ ಕುಮಾರ ನಾಯ್ಕ, ಶಿಕ್ಷಣ ಸಂಯೋಜಕ ಮಹೇಶ ಹೆಗಡೆ,ಸಮಾಜಕಲ್ಯಾಣ ಇಲಾಖೆಯ ಎಸ್.ಪಿ.ನರ್ಹೋನಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

    Share This
    300x250 AD
    300x250 AD
    300x250 AD
    Back to top