• Slide
    Slide
    Slide
    previous arrow
    next arrow
  • 12-14 ವರ್ಷ ವಯಸ್ಸಿನ 1ಕೋಟಿ ಮಕ್ಕಳಿಗೆ ಲಸಿಕೆ ನೀಡಿಕೆ

    300x250 AD

    ನವದೆಹಲಿ: ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದಡಿಯಲ್ಲಿ ಇದುವರೆಗೆ ದೇಶದಲ್ಲಿ 182 ಕೋಟಿ 87 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನಾಗರಿಕರಿಗೆ ನೀಡಲಾಗಿದೆ. ನಿನ್ನೆ 29 ಲಕ್ಷಕ್ಕೂ ಹೆಚ್ಚು ಡೋಸ್‌ಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

    12 ರಿಂದ 14 ವರ್ಷ ವಯಸ್ಸಿನ ಒಂದು ಕೋಟಿ ಐದು ಲಕ್ಷಕ್ಕೂ ಹೆಚ್ಚು ಮಕ್ಕಳು ತಮ್ಮ ಮೊದಲ ಡೋಸ್ ಕೋವಿಡ್ ಲಸಿಕೆಯನ್ನು ಇಲ್ಲಿಯವರೆಗೆ ಪಡೆದಿದ್ದಾರೆ.

    ಟ್ವೀಟ್‌ನಲ್ಲಿ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಲಸಿಕೆ ಹಾಕಿಸಿಕೊಂಡ ಎಲ್ಲ ಯುವ ಯೋಧರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    300x250 AD

    2 ಕೋಟಿ 23 ಲಕ್ಷಕ್ಕೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕೆಲಸಗಾರರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಇದುವರೆಗೆ ನೀಡಲಾಗಿದೆ.

    ಪ್ರಸ್ತುತ ಕೋವಿಡ್ ಚೇತರಿಕೆಯ ಪ್ರಮಾಣವು 98.75 ಪ್ರತಿಶತದಲ್ಲಿದೆ ಮತ್ತು ಕಳೆದ 24 ಗಂಟೆಗಳಲ್ಲಿ ಸುಮಾರು 2,349 ಜನರು ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಒಟ್ಟು ಚೇತರಿಕೆಗಳು 4 ಕೋಟಿ 24 ಲಕ್ಷದ 80 ಸಾವಿರದ 436.

    Share This
    300x250 AD
    300x250 AD
    300x250 AD
    Leaderboard Ad
    Back to top