Slide
Slide
Slide
previous arrow
next arrow

ಏ.5ಕ್ಕೆ ರಾಜ್ಯಕ್ಕೆ ಮೋದಿ ಭೇಟಿ; ಸಿಎಂ ಬೊಮ್ಮಾಯಿ

300x250 AD

ಹುಬ್ಬಳ್ಳಿ: ಏ.5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

300x250 AD

ಕೇಂದ್ರ ಸಚಿವ ಅಮಿತ್ ಷಾ ಅವರಿಂದ ಕ್ಷೀರ ಅಭಿವೃದ್ಧಿ ಬ್ಯಾಂಕ್ ಉದ್ಘಾಟನೆ
ಇದಲ್ಲದೆ ಏ.1 ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ತರಬೇಕೆಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೀರ ಅಭಿವೃದ್ಧಿ ಬ್ಯಾಂಕ್ ಪ್ರಾರಂಭ ಮಾಡಲು ಉದ್ದೇಶಿಸಿದೆ. ಅದರ ಲಾಂಛನದ ಉದ್ಘಾಟನೆ ಮಾಡಲು ಬೃಹತ್ ಸಭೆ ಏರ್ಪಾಡು ಮಾಡಲಾಗುತ್ತಿದೆ. ಕ್ಷೀರ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡಿ ಆರ್ಥಿಕ ಕ್ರಾಂತಿಯಾಗಲಿದೆ. ಇದರಿಂದ ರೈತರ ಆದಾಯ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಲಿದೆ. ರೈತರಿಗೆ ಆರ್ಥಿಕ ಸಹಾಯ ದೊರೆಯಲು ನೆರವಾಗಲಿದೆ. ಲಾಂಛನ ಹಾಗೂ ಯಾಶಸ್ವಿನಿ ಯೋಜನೆಯ ಉದ್ಘಾಟನೆಯನ್ನು ಅಮಿತ್ ಷಾ ಅವರು ನೆರವೇರಿಸಲಿದ್ದಾರೆ ಎಂದರು.

Share This
300x250 AD
300x250 AD
300x250 AD
Back to top