• first
    second
    third
    previous arrow
    next arrow
  • ಸಿಇಟಿ ಪ್ರವೇಶ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಶುಲ್ಕ ಪಾವತಿಗೆ ಏ.22 ರ ವರೆಗೆ ಅವಕಾಶ

    300x250 AD

    ಬೆಂಗಳೂರು: ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಸುವ ಸಿಇಟಿ ಪ್ರವೇಶ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ.
    ಜೂ.16,17,18ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

    ಈ ಕುರಿತು ಟ್ವೀಟ್‌ ಮಾಡಿರುವ ಅವರು, ಜೂ.16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆಗಳು ನಡೆಯಲಿವೆ, 17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

    ಏ. 5 ರಿಂದ 20ರ ವರೆಗೆ ಸಿಇಟಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಏ. 22ರ ವರೆಗೆ ಶುಲ್ಕ ಪಾವತಿಗೆ ಅವಕಾಶ ಇರುತ್ತದೆ. ಮಾಹಿತಿ ಪರಿಷ್ಕರಣೆಗೆ ಮೇ 2ರಿಂದ 6ರ ವರೆಗೆ ಅನುಮತಿ ನೀಡಲಾಗಿದೆ. ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್​.ಅಶ್ವತ್ಥ್​​ ನಾರಾಯಣ ತಿಳಿಸಿದ್ದಾರೆ.

    300x250 AD

    Share This
    300x250 AD
    300x250 AD
    300x250 AD
    Back to top