• Slide
    Slide
    Slide
    previous arrow
    next arrow
  • ಸತತ 2ನೇ ಬಾರಿಗೆ ಗೋವಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಪ್ರಮೋದ್ ಸಾವಂತ್

    300x250 AD

    ನವದೆಹಲಿ: ಪ್ರಮೋದ್ ಸಾವಂತ್ ಅವರು ಸೋಮವಾರ ಗೋವಾ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.

    ಟಾಲೀಗಾವೊದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಇತರ ಕೇಂದ್ರ ಸಚಿವರು ಮತ್ತು ಕನಿಷ್ಠ ಎಂಟು ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    300x250 AD

    ಇತ್ತೀಚೆಗಷ್ಟೇ ನಡೆದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಗಳ ಪೈಕಿ  20 ಸ್ಥಾನಗಳನ್ನು ಗೆದ್ದು, ಏಕೈಕ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತಕ್ಕಿಂತ ಒಂದು ಸ್ಥಾನ ಕಡಿಮೆಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಮತ್ತು ಸ್ವತಂತ್ರ ಅಭ್ಯರ್ಥಿಗಳ ಸಹಾಯದಿಂದ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top