Slide
Slide
Slide
previous arrow
next arrow

ಸಂಯಮದಿಂದ ವರ್ತಿಸುವಂತೆ ಸಾರ್ವಜನಿಕರಿಗೆ  ಸಿಎಂ ಮನವಿ

300x250 AD

ರಾಜ್ಯದಲ್ಲಿ ಹಲವಾರು ಸೂಕ್ಷ್ಮ ವಿಚಾರಗಳು ಚರ್ಚೆಯಾಗುತ್ತಿದ್ದು ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಾಂತಿ ಮತ್ತು ಪ್ರಗತಿಗೆ ಕರ್ನಾಟಕ ಹೆಸರುವಾಸಿಯಾಗಿದೆ.  ಸಾರ್ವಜನಿಕವಾಗಿ ಹಲವಾರು ವಿಷಗಳು ಚರ್ಚೆಯಾಗುತ್ತಿದ್ದು ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದರು.

300x250 AD

ಕರ್ನಾಟಕದ ಬೆಳವಣಿಗೆಗಳ ಬಗ್ಗೆ ಕೋಮುವಾದ ಜಾಗತಿಕ ಸಂಘರ್ಷವಾಗುತ್ತಿದೆ ಎಂದು  ಕಿರಣ್ ಮುಜುಂದಾರ್ ಷಾ ಟ್ವೀಟ್ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ಸಮವಸ್ತ್ರ ವಿಷಯ ಈಗಾಗಲೇ ಇತ್ಯರ್ಥವಾಗಿದೆ. ಸಾಮಾಜಿಕ ಸಮಸ್ಯೆಗಳು ಉದ್ಭವಾಗುವ ಸಂದರ್ಭದಲ್ಲಿ ಎಲ್ಲರೂ ಒಟ್ಟಿಗೇ ಕೂತು ಚರ್ಚೆ ಮಾಡಿ ಬಗೆಹರಿಸಲು ಸಾಧ್ಯವಿದೆ‌. ಎಲ್ಲರೂ ಸಂಯಮದಿಂದ ವರ್ತಿಸಿಬೇಕು ಆ ಮೂಲಕ ಸಾಮಾಜಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Share This
300x250 AD
300x250 AD
300x250 AD
Back to top