ಯಲ್ಲಾಪುರ: ಅರಣ್ಯ ಭೂಮಿ ಹಕ್ಕಿಗೆ ಸಂಬಂಧಿಸಿದಂತೆ ವ್ಯಾಪಕವಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅರಣ್ಯವಾಸಿಗಳನ್ನು ಉಳಿಸಿ ಜಾಗೃತಿ ಜಾಥಾ ಕಾರ್ಯಕ್ರಮವು ಏಪ್ರಿಲ್ 5 ರಂದು ಯಲ್ಲಾಪುರದಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 5 ಮಂಗಳವಾರದಂದು ಬೆಳಿಗ್ಗೆ 10:00 ಗಂಟೆಗೆ ಯಲ್ಲಾಪುರ ತಾಲೂಕಿನ ಮಾವಿನಮನೆ ಗ್ರಾಮ ಪಂಚಾಯಿತಿ ಹಾಗೂ ಸಾಯಂಕಾಲ 3:00 ಘಂಟೆಗೆ ವಜ್ರಳ್ಳಿಯಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಜಾಥಾದ ಭಾಗವಾಗಿ ʼಹೋರಾಟದ ವಾಹನʼವು ಮುಂದಿನ 30 ದಿನಗಳ ಕಾಲ 2,000 ಕೀ.ಮೀ. ಸಂಚರಿಸಿ ಜಿಲ್ಲೆಯ 500 ಹಳ್ಳಿಗಳಿಗೆ ಭೇಟಿ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.