ಶಿರಸಿ; ಕರ್ನಾಟಕ ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿ ಬೆಂಗಳೂರು ವತಿಯಿಂದ ಪ್ರಧಾನ ಮಾಡುವ ರಾಜ್ಯಮಟ್ಟದ ‘ಶಿಕ್ಷಣ ಸಿರಿ’ ಪ್ರಶಸ್ತಿಗೆ ನರೆಬೈಲಿನ ಚಂದನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ದೇವರಾಜ್ ನಾಯ್ಕ್ ಭಾಜನರಾಗಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಗಣನೀಯ ಸೇವೆಯನ್ನು ಪರಿಗಣಿಸಿ ದೇವರಾಜ್ ನಾಯಕ್ ಪ್ರಶಸ್ತಿಗೆ ಆಯ್ಕೆಯಾಗಿದ್ದು ಏ.10 ರಂದು ಶಿರಸಿಯ ಶಾಸಕರ ಸರಕಾರಿ ಮಾದರಿ ಶಾಲೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವ ಇವರಿಗೆ ಶಾಲೆಯ ಕಾರ್ಯದರ್ಶಿ, ಆಡಳಿತಾಧಿಕಾರಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ,ಪಾಲಕರು ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.