ಶಿರಸಿ; ಕರ್ನಾಟಕ ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿ ಬೆಂಗಳೂರು ವತಿಯಿಂದ ಪ್ರಧಾನ ಮಾಡುವ ರಾಜ್ಯಮಟ್ಟದ ‘ಶಿಕ್ಷಣ ಸಿರಿ’ ಪ್ರಶಸ್ತಿಗೆ ಹುಲೇಕಲ್ ನ ಶ್ರೀದೇವಿ ಶಿಕ್ಷಣ ಸಂಸ್ಥೆಯ ಶಿಕ್ಷಕದ್ವಯರು ಆಯ್ಕೆಯಾಗಿದ್ದಾರೆ.
ಕಾಲೇಜು ವಿಭಾಗದ ಅರ್ಥಶಾಸ್ತ್ರ ಉಪನ್ಯಾಸಕರಾದ ಪ್ರತಿಭಾ ಕರ್ಜಗಿ ಹಾಗೂ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕರಾದ ಗಣೇಶ ಬಂಟ ಇವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಏ.10 ರಂದು ಶಿರಸಿಯ ಶಾಸಕರ ಸರಕಾರಿ ಮಾದರಿ ಶಾಲೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿಯ ಅಧ್ಯಕ್ಷರಾದ ಬಸವರಾಜ ಗುರಿಕಾರ ಪ್ರಶಸ್ತಿ ನೀಡಿ ಗೌರವಿಸಿದರು.
ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವ ಈರ್ವರನ್ನು ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು,ಪ್ರಾಂಶುಪಾಲರು,ಉಪನ್ಯಾಸಕರು,ಶಿಕ್ಷಕರು,ಆಡಳಿತ ಮಂಡಳಿ ಹಾಗೂ ಇತರ ಸಿಬ್ಬಂದಿ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.