ಯಲ್ಲಾಪುರ: ವಿಶ್ವದರ್ಶನ ಪಿ.ಯು ಕಾಲೇಜು ಹಾಗೂ ವಿಶ್ವದರ್ಶನ ಕರಿಯರ್ ಅಕಾಡೆಮಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ “ಎಸ್.ಎಸ್.ಎಲ್.ಸಿ ನಂತರ ಮುಂದೇನು?” ಎಂಬ ವಿಶೇಷ ಕಾರ್ಯಕ್ರಮವನ್ನು ಏಪ್ರಿಲ್ 13ರಂದು ಬೆಳಗ್ಗೆ 10ಗಂಟೆಗೆ ಸಂಸ್ಥೆಯ ಆವಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ವೈ.ಟಿ.ಎಸ್.ಎಸ್ ನ ವಿಶ್ರಾಂತ ಪ್ರಾಚಾರ್ಯ ಶ್ರೀರಂಗ ಕಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿರಸಿಯ ಇಕ್ರಾ ಪ.ಪೂ ಕಾಲೇಜಿನ ಪ್ರಾಚಾರ್ಯರಾದ ರವೀಂದ್ರ ಹೆಗಡೆ ಶೈಕ್ಷಣಿಕ ಮಾರ್ಗದರ್ಶನ ನೀಡಲಿದ್ದಾರೆ. ವಿಶ್ವದರ್ಶನ ಪಿ.ಯು ಕಾಲೇಜಿನ ಪ್ರಾಚಾರ್ಯರಾದ ಡಾ. ದತ್ತಾತ್ರೇಯ ಗಾಂವ್ಕರ್ ಭಾಗವಹಿಸಲಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ವಿಶ್ವದರ್ಶನದಲ್ಲಿ ಏ.13ರಂದು SSLC ನಂತರ ಮುಂದೇನು? ವಿಶೇಷ ಕಾರ್ಯಕ್ರಮ
