ಹೊನ್ನಾವರ: ತಾಲೂಕಿನ ಮಹಿಮೆ ಮಹಿಷಾಸುರ ಮರ್ದಿನಿ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಜರುಗಿತು.
ಬೆಳಿಗ್ಗೆಯಿಂದಲೇ ಧಾರ್ಮಿಕ ವಿಧಿವಿಧಾನದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ಶಾಸಕ ಸುನೀಲ ನಾಯ್ಕ ಆಗಮಿಸಿ ದೇವರ ದರ್ಶನ ಪಡೆದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಸ್ಥಾನದ ಅಭಿವೃದ್ಧಿಗೆ ಐವತೈದು ಸಾವಿರ ವೈಯಕ್ತಿಕ ಕಾಣಿಕೆಯನ್ನು ಸಲ್ಲಿಸಿದರು. ಗ್ರಾಮದಲ್ಲಿ ಮೂರುಕೋಟಿ ವೆಚ್ಚದ ರಸ್ತೆ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನದಲ್ಲಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು, ಸ್ಥಳೀಯ ಸಮಾಜ ಸೇವಕರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಗ್ರಾಮಸ್ಥರ ಪರವಾಗಿ ಶಾಸಕರನ್ನು ಇದೇ ವೇಳೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮಂಜುನಾಥ ನಾಯ್ಕ, ಸದಸ್ಯರಾದ ವಿನೋದ ನಾಯ್ಕ ಮಾವಿನಹೊಳೆ, ಗಣಪತಿ ನಾಯ್ಕ ಬಿಟಿ, ಗಣೇಶ ನಾಯ್ಕ, ಮಹೇಶ ನಾಯ್ಕ ಅಡಿಗದ್ದೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹನುಮಂತ ನಾಯ್ಕ, ಮರಾಠ ಸಮುದಾಯದ ಮುಖಂಡ ನಾರಾಯಣ ಮರಾಠಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.