ಕಾರವಾರ: ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯವಿವಾಹ, ಬಾಲಕಾರ್ಮಿಕತೆ, ಭಿಕ್ಷಾಟನೆ , ಮಕ್ಕಳ ಕಾಣೆಯಾಗುವಿಕೆ, ಅಪಹರಣ ತಡೆಗಟ್ಟಲು ಹಾಗೂ ಮಕ್ಕಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಸರಕಾರದ ಪ್ರತಿಯೊಂದು ಇಲಾಖೆಗಳು ಸಹಕಾರ, ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಅಶೋಕ ಯರಗಟ್ಟಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜರುಗಿದ ಆರ್‍ಟಿಇ, ಪೋಕ್ಸೋ ಕಾಯ್ದೆ 2012, ಬಾಲನ್ಯಾಯ ಕಾಯ್ದೆ 2015ರ ಅನುಷ್ಠಾನದ ಕುರಿತು ಜಿಲ್ಲೆಯ ಎಲ್ಲ ಭಾಗಿದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಹಕ್ಕುಗಳ ರಕ್ಷಣಾ ವಿಚಾರದಲ್ಲಿ ಪ್ರತಿಯೊಂದು ಇಲಾಖೆಗಳು ಮುತುವರ್ಜಿವಹಿಸಿ ಮಕ್ಕಳಿಗೆ ಮಾಹಿತಿ ಮತ್ತು ಯೋಜನೆಗಳನ್ನು ತಲುಪಿಸುವ ಕಾರ್ಯವನ್ನು ಮಾಡಬೇಕೆಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಗಾ ಎಂ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ್, ಡಿವೈಎಸ್‍ಪಿ ವ್ಯಾಲೆಂಟೈನ್ ಡಿಸೋಜಾ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆ ಜಯಶ್ರೀ ಚನಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ,ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾಂತಪುರಾಣಿ, ಜಿಲ್ಲಾ ಆರೋಗ್ಯಾಧಿಕಾರಿ ಶರದ್ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸೋನಲ್ ಐಗಳ ಸೇರಿದಂತೆ ಇತರ ಇಲಾಖಾ ಅಧಿಕಾರಿಗಳು ಇದ್ದರು.