ಶಿರಸಿ: ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರನ್ನು ಬಂಧಿಸುವಂತೆ ಆಗ್ರಹಿಸಿ ಏಪ್ರಿಲ್ 16ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿರಸಿ ಬಸ್ ಸ್ಟ್ಯಾಂಡ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ತದನಂತರ ಸತೀಶ್ ಜಾರಕಿಹೊಳಿ ಉಪಸ್ಥಿತಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಾರ್ಯಕಾರಣಿ ಸಭೆ ನಡೆಯಲಿದ್ದು, ಪ್ರತಿಭಟನೆ ಹಾಗೂ ಸಭೆಯಲ್ಲಿ ಜಿಲ್ಲೆಯ ಮಾಜಿ ಶಾಸಕರುಗಳಾದ ಸತೀಶ ಸೈಲ್, ಮಂಕಾಳ ವೈದ್ಯ, ಶಾರದಾ ಶೆಟ್ಟಿ,ಎಸ್.ಎಲ್ ಘೋಟ್ನೇಕರ್ ಉಪಸ್ಥಿತರಿರುತ್ತಾರೆ.
ಸಭೆಗೆ ಕೆಪಿಸಿಸಿ ಪದಾಧಿಕಾರಿಗಳು, ಉಸ್ತುವಾರಿಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರು,ಪದಾಧಿಕಾರಿಗಳು, ಎಲ್ಲ ಸ್ತರದ ಜನಪ್ರತಿನಿಧಿಗಳು,ಬೂತ್ ಮತ್ತು ಘಟಕದ ಅಧ್ಯಕ್ಷರು,ಮುಖಂಡರು, ಕಾರ್ಯಕರ್ತರು ಆಗಮಿಸಲು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಭೀಮಣ್ಣ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.