ದಾಂಡೇಲಿ: ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಸಾಗಾಟ ಜಾಲದ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ದಾಂಡೇಲಿ ನಗರದ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸೇರಿದಂತೆ ಕಾರು ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಅಧೀಕ್ಷಕಿ ಸುಮನ್ ಪೆನ್ನೇಕರ್,ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬದರಿನಾಥ,ದಾಂಡೇಲಿ ಉಪವಿಭಾಗದ ಡಿವೈಎಸ್ಪಿ ಕೆಎಲ್ ಗಣೇಶ್, ಸಿಪಿಐ ಪ್ರಭು ಗಂಗನಹಳ್ಳಿ ಮಾರ್ಗದರ್ಶನದಲ್ಲಿ ನಗರದ ಪೊಲೀಸ್ ಠಾಣೆಯ ಪಿಎಸ್ಐ ಕಿರಣ್ ಪಾಟೀಲ್, ಯಲ್ಲಪ್ಪ ಎಸ್,ಹೆಡ್ ಕಾನ್ಸ್ಟೇಬಲ್ ಗಳಾದ ಮಲ್ಲಿಕಾರ್ಜುನ ಸವದತ್ತಿ,ಮಹಾದೇವ ಬಳಗಾರ, ಮಂಜಪ್ಪ ಟಿ ಹಾಗೂ ಇತರರನ್ನು ಒಳಗೊಂಡ ತಂಡ ರಚಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಅಂದಾಜು ₹.60000 ಬೆಲೆಬಾಳುವ 2.044 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ .
ಪಿಎಸ್ಐ ಯಲ್ಲಪ್ಪ ಎಸ್ ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.ಈ ಬಗ್ಗೆ ಉತ್ತರ ಕನ್ನಡ ಕಾರವಾರದ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.