ಕಾರವಾರ: ಜಿಲ್ಲೆಯ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2022-23ನೇ ಸಾಲಿನ ಪರಿಶಿಷ್ಟ ಪಂಗಡದ ಎಲ್ಲಾ ಸಮುದಾಯದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು (ಕಾರು/ ಜೀಪ್) ಹಾಗೂ ಭಾರಿ ವಾಹನ (ಬಸ್ಸು) ಚಾಲನಾ ತರಬೇತಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ಲಘು ವಾಹನ ಚಾಲನಾ ತರಬೇತಿ ಪಡೆಯುವ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟವರಾಗಿರಬೇಕು ಹಾಗೂ ಭಾರಿ ವಾಹನ ಚಾಲನಾ ತರಬೇತಿ ಪಡೆಯುವವರು 20 ವರ್ಷ ವಯೋಮಿತಿ ಪೂರೈಸಿರಬೇಕು. ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಆಧಾರ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ 5 ಭಾವಚಿತ್ರ ಅವಶ್ಯಕ ಮಾಹಿತಿಯೊಂದಿಗೆ ಏ.20ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.karnataka.gov.in / kmvstdcl ಮತ್ತು ದೂರವಾಣಿ ಸಂಖ್ಯೆ: 08382- 226 903ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.