ಕಾರವಾರ: ತಾಂಡವ ಕಲಾನಿಕೇತನ ಸಂಸ್ಥೆಯಿಂದ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಏ.27ರಿಂದ ಮೇ 01ರವರೆಗೆ ಕರಾವಳಿ ಹಬ್ಬ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಂಜುನಾಥ ನಾಯ್ಕ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹಿಸುವ ಹಾಗೂ ಕಲೆಯನ್ನು ಬೆಳೆಸುವ ಉದ್ದೇಶದಿಂದ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ. ಆದರೆ ಕೊರೋನಾದಿಂದಾಗಿ ಕಳೆದ ಎರಡು ವರ್ಷದಿಂದ ಕಾರ್ಯಕ್ರಮ ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಅದ್ಭುತವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.
ಕಾರ್ಯಕ್ರಮ ಆಯೋಜನೆಗೆ ಸಮಿತಿ ರಚನೆ ಮಾಡಲಾಗಿದ್ದು, ಜಿಲ್ಲಾ ಮೀನು ಮಾರಾಟಗಾರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್ ವಹಿಸಲಿದ್ದಾರೆ. ಐದು ದಿನ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರೊಂದಿಗೆ ಕನ್ನಡ ಹಾಗೂ ಹಿಂದಿ ಸಿನಿಮಾದ ಪ್ರಖ್ಯಾತ ಗಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಯಾರೆಲ್ಲಾ ಆಗಮಿಸಲಿದ್ದಾರೆ ಎನ್ನುವ ಬಗ್ಗೆ ಇನ್ನೆರಡು ದಿನಗಳಲ್ಲಿ ಹೆಸರನ್ನು ಬಿಡುಗಡೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವ ತಂಡಗಳು ಇದ್ದಲ್ಲಿ ನೂತನ್ ಜೈನ್ (ಮೊ.ಸಂ: 70194 49866) ಅವರನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ವೇಳೆ ಟಿ.ಡಿ.ನಾಯ್ಕ, ನೂತನ್ ಜೈನ್, ಸದಾನಂದ ನಾಯ್ಕ, ಮಾರುತಿ ತಾಂಡೇಲ, ಲಕ್ಷ್ಮಣ ನಾಯ್ಕ, ಅಶೋಕ ನಾಯ್ಕ ಇದ್ದರು.