ಸಿದ್ದಾಪುರ: ತಾಲೂಕಿನ ತ್ಯಾಗಲಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ‘ದಾನಿಗಳ ನಾಮಫಲಕ ಅನಾವರಣ’ವನ್ನು ಏ.20 ಬುಧವಾರದಂದು ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಧಾರವಾಡ ಹಾಲು ಒಕ್ಕೂಟ ಹಾಗೂ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಉಪೇಂದ್ರ ಪೈ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಆಗಮಿಸಲಿದ್ದಾರೆ.
ಘಟಿಗೆ ಭಾಗಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಬೂರನ್ ಗೌರವ ಉಪಸ್ಥಿತಿ ಇರಲಿದ್ದು, ಕಾರ್ಯಕ್ರಮದ ಅಧ್ಯಕ್ಷರಾಗಿ ದೇವಸ್ಥಾನ ಆಡಳಿತ ಸೇವಾ ಸಮಿತಿ ಅಧ್ಯಕ್ಷ ವೆಂಕಟ್ರಮಣ ಹೆಗಡೆ ಶಿಂಗು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮಕ್ಕೆ ಎಲ್ಲಾ ಭಕ್ತಾದಿಗಳು, ಗ್ರಾಮಸ್ಥರು ಪಾಲ್ಗೊಳ್ಳಲು ಪ್ರಕಟಣೆ ತಿಳಿಸಿದೆ.