• first
    second
    third
    Slide
    previous arrow
    next arrow
  • ಶಾಲೆಗಳಲ್ಲಿನ ಬಹುಸಂಖ್ಯಾತರ ಧರ್ಮದ ಅಂಶ ಪಠ್ಯದಲ್ಲಿ: ಬಿ.ಸಿ.ನಾಗೇಶ

    300x250 AD

    ಬೆಂಗಳೂರು: ಶಾಲೆಗಳಲ್ಲಿ ಶೇ 90 ರಷ್ಟು ವಿದ್ಯಾರ್ಥಿಗಳು ಯಾವ ಧರ್ಮಕ್ಕೆ ಸೇರಿರುತ್ತಾರೋ ಆ ಧರ್ಮದ ಅಂಶಗಳನ್ನು ಒಳಗೊಂಡ ನೈತಿಕ ಪಾಠವನ್ನು ಮುಂದಿನ ವರ್ಷದಿಂದ ಬೋಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಶೈಕ್ಷಣಿಕ ವರ್ಷದಿಂದ ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ ಅಲ್ಲದೆ, ಎಲ್ಲ ಧರ್ಮಗಳ ಉತ್ತಮ ಅಂಶಗಳನ್ನು ಒಳಗೊಂಡ ನೈತಿಕ ಶಿಕ್ಷಣವನ್ನು ಶಾಲೆಗಳಲ್ಲಿ ಪರಿಚಯಿಸಲಾಗುವುದು ಎಂದರು.

    ‘ಯಾವ ಧರ್ಮದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಶಾಲೆಗಳಿಗೆ ಬರುತ್ತಾರೋ ಆ ಮಕ್ಕಳು ಕೇಳುವ ವಿಚಾರಗಳನ್ನು ಅಳವಡಿಸುತ್ತೇವೆ. ಯಾವುದನ್ನೆಲ್ಲ ಸೇರಿಸಬೇಕು ಎಂಬುದನ್ನು ತಜ್ಞರ ಸಮಿತಿ ನಿರ್ಣಯಿಸುತ್ತದೆ’ ಎಂದರು.

    300x250 AD

    ರಾಜ್ಯದ ಮದರಸಾಗಳಲ್ಲೂ ಆಧುನಿಕ ಶಿಕ್ಷಣವನ್ನು ನೀಡಬೇಕು ಎಂಬ ಬೇಡಿಕೆ ಪೋಷಕರಿಂದ ಬಂದಿದೆ. ಇಲ್ಲಿ ಓದಿದ ಮಕ್ಕಳಿಗೆ ಉದ್ಯೋಗ ಮತ್ತಿತರ ಕಡೆಗಳಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪೋಷಕರು ಹೇಳಿದ್ದಾರೆ ಹೇಳಿದರು.,

    ‘ಆಧುನಿಕ ಶಿಕ್ಷಣ ಆರಂಭಿಸಬೇಕು ಎಂಬ ಬಗ್ಗೆ ಮದರಸಾ ಅಥವಾ ಇತರ ಸಂಸ್ಥೆಗಳಿಂದಾಗಲೀ ಪ್ರಸ್ತಾವನೆ ಬಂದಿಲ್ಲ. ಪೋಷಕರೂ ಮನವಿ ಸಲ್ಲಿಸಿಲ್ಲ. ನಾನು ರಾಜ್ಯದ ವಿವಿಧಡೆ ಭೇಟಿ ನೀಡಿದಾಗ ಪೋಷಕರು ತಾವಾಗಿಯೇ ಆಧುನಿಕ ಶಿಕ್ಷಣದ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಅಧಿಕೃತ ಬೇಡಿಕೆ ಬಂದರೆ ಮಾತ್ರ ಪರಿಶೀಲನೆ ನಡೆಸುತ್ತೇವೆ’ ಎಂದು ನಾಗೇಶ್ ಸ್ಪಷ್ಟಪಡಿಸಿದರು.

    Share This
    300x250 AD
    300x250 AD
    300x250 AD
    Back to top