ನವದೆಹಲಿ: ಭಾರತದ ಬಾಸ್ಮತಿಯೇತರ ಅಕ್ಕಿಯ ರಫ್ತು ಶೇ.109 ರಷ್ಟು ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ನೀತಿಗಳು ರೈತರಿಗೆ ಜಾಗತಿಕ ಮಾರುಕಟ್ಟೆಯನ್ನು ಪ್ರವೇಶಿಸಲು ಮತ್ತು ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತಿವೆ ಎಂದಿದ್ದಾರೆ.
ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಪಂಜಾಬ್, ತಮಿಳುನಾಡು, ಆಂಧ್ರ ಪ್ರದೇಶ, ಬಿಹಾರ, ಛತ್ತೀಸ್‌ಗಢ, ಒಡಿಶಾ, ಅಸ್ಸಾಂ ಮತ್ತು ಹರಿಯಾಣ ಅಕ್ಕಿಯನ್ನು ಉತ್ಪಾದಿಸುವ ಪ್ರಮುಖ ರಾಜ್ಯಗಳಾಗಿದ್ದು, ಡೈರೆಕ್ಟರೇಟ್ ಜನರಲ್ ಆಫ್ ಕಮರ್ಷಿಯಲ್ ಇಂಟೆಲಿಜೆನ್ಸ್ & ಸ್ಟ್ಯಾಟಿಸ್ಟಿಕ್ಸ್ ದತ್ತಾಂಶದ ಪ್ರಕಾರ, ಬಾಸ್ಮತಿ ಅಲ್ಲದ ಅಕ್ಕಿಯ ರಫ್ತು 2013-14 ರಲ್ಲಿ 2,925 ಮಿಲಿಯನ್ ಯುಎಸ್ ಡಾಲರ್‌ಗಳಿಂದ 2021-22 ರಲ್ಲಿ 6015 ಮಿಲಿಯನ್ ಯುಎಸ್ ಡಾಲರ್‌ಗೆ ತಲುಪಿದೆ. ಭಾರತವು ಕಳೆದ ಆರ್ಥಿಕ ವರ್ಷದಲ್ಲಿ ಜಗತ್ತಿನಾದ್ಯಂತ 150 ದೇಶಗಳಿಗೆ ಅಕ್ಕಿಯನ್ನು ರಫ್ತು ಮಾಡಿದೆ.