ಮುಂಡಗೋಡ: ತಾಲೂಕಿನ ಬಡ್ಢಿಗೇರಿ ಬಳಿ ಕೂಲಿಕಾರರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನವೊಂದು ಪಲ್ಟಿಯಾದ ದುರ್ಘಟನೆ ಸಂಭವಿಸಿದೆ.
ಗೌಳಿವಾಡಾದಿಂದ ಕುಸೂರ ಗ್ರಾಮದ ಕಬ್ಬಿನಗದ್ದೆಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.ಮಳ್ಳು ಗಾವಡೆ ಎಂಬಾತನೇ ಸಾವಿಗೀಡಾದ ದುರ್ದೈವಿಯಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯಗಳಾಗಿವೆ.
ಗಾಯಗೊಂಡವರನ್ನು ಮುಂಡಗೋಡ ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ಕಳಿಸಲಾಗಿದ್ದು, ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.