ಕಾರವಾರ: ಜಿಲ್ಲೆಯಲ್ಲಿ ಮಂಗನ ಖಾಯಿಲೆ ಕಾಲೂರದಂತೆ ನೋಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಶುಕ್ರವಾರ ನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿ, ಈಗಾಗಲೇ ಮಂಗನ ಖಾಯಿಲೆಯಿಂದ ಸಿದ್ದಾಪುರದಲ್ಲಿ ಓರ್ವ ಮಹಿಳೆ ಮೃತಳಾಗಿದ್ದು, ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗೆ ಸ್ಥಳಕ್ಕೆ ತೆರಳಿ ಪರಿಸ್ಥಿತಿ ಅವಲೋಕಿಸಲು ತಿಳಿಸಿದ್ದೇನೆ. ಮಂಗನ ಖಾಯಿಲೆ ತಡೆಗಟ್ಟುವಲ್ಲಿ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದ್ದು, ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದರು.
ಈ ವೇಳೆ ಶಾಸಕಿ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಸೇರಿದಂತೆ ಇನ್ನಿತರರು ಇದ್ದರು.